Rediff.com |  Feedback  
You are here: » Rediff Home » Discussion Boards » Permalink
  
View : Single Message | Complete Thread | Read complete Discussion
conversions Modus operandi
by satya on Sep 17, 2008 01:05 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹುಟ್ಟಿಬೆಳೆದವನು ನಾನು.ಮತಾಂತರ ಪ್ರಕ್ರಿಯೆ ಹೇಗೆ ಜರುಗುತ್ತದೆ ಎನ್ನುವುದನ್ನು ಬಹಳ ಚೆನ್ನಾಗಿ ನೋಡುತ್ತ ಬಂದಿದ್ದೇನೆ. ಹೊರ ಜಿಲ್ಲೆಗಳಿಂದ ಬಂದ ಬಡ ಕೂಲಿಕಾರ್ಮಿಕರು, ಮತಾಂತರ ಮಾಡ ಹೊರಡುವವರ ಮೊದಲ ಟಾರ್ಗೆಟ್ಟು. ಅವರುಗಳಿಗೆ ಹಣದ ಆಸೆ ತೋರಿಸಲಾಗುತ್ತದೆ, ಕೇವಲ ಅದೊಂದಕ್ಕೆ ಬಹಳ ಸಂಸಾರಗಳು ದಿಕ್ಕು ತಪ್ಪುತ್ತವೆ.ಇನ್ನು ಉಳಿದವರಿಗೆ, ಹಿಂದೂ ಧರ್ಮದ ದೇವರುಗಳು ಕೈಲಾಗದವರು, ಲಂಪಟರು, ಅವರುಗಳಿಗೆ ತಮ್ಮನ್ನು ತಾವು ಸರಿಯಾಗಿ ಇಟ್ಟುಕೊಳ್ಳುವ ಯೋಗ್ಯತೆ ಇಲ್ಲ, ಇನ್ನು ನಿಮ್ಮನ್ನು ಹೇಗೆ ಚೆನ್ನಾಗಿ ನೋಡಿಕೊಂಡಾರು, ನೀವು ಇಷ್ಟೆಲ್ಲ ಕಷ್ಟದಲ್ಲಿರುವುದಕ್ಕೆ ; ಈ ಧರ್ಮವನ್ನು ನೀವು ನಂಬಿದ್ದೇ ಕಾರಣ ಅನ್ನುವ ಪುಂಗಿ ಊದಲಾಗುತ್ತದೆ.ಒಂದೆರಡņ 5; ಸಂಸಾರಗಳು ಬಲೆಗೆ ಬಿದ್ದರೆ ಸಾಕು, ಇನ್ನುಳಿದವು ತಾನೇ ತಾನಾಗಿ ಬರುತ್ತವೆ ಜಾಲದೊಳಗೆ. ಮೊದಲು ಕನ್ವರ್ಟ್ ಆದ ಕುಟುಂಬಗಳಿಂದಾಗಿ , ಮತ್ತೆ ಯಾರಾದರೂ ಮತಾಂತರ ಹೊಂದಿದರೆ, ಆ ಕುಟುಂಬಕ್ಕೆ ಬೋನಸ್ ದುಡ್ಡೂ ಸಿಗುತ್ತದೆ. ಮಂಗಳೂರು, ಉಡುಪಿಗಳ ಹೊರವಲಯದಲ್ಲಿ ವರುಷಗಳಿಂದ ಈ ಪ್ರಕ್ರಿಯೆ ನಡೆದುಕೊಂಡೇ ಬಂದಿದೆ.

ನಾನು ಕ್ರಿಶ್ಚಿಯನ್ ಧರ್ಮ ವಿರೋಧಿಯಲ್ಲ. ಬಹಳಷ್ಟು ವರುಷ ಅವರುಗಳ ಜೊತೆಗೇ ಬೆಳೆದಿದ್ದೇನೆ. ಅವರುಗಳ ಆಚಾರ ವಿಚಾರಗಳ ಬಗ್ಗೆ ಚೆನ್ನಾದ ಅರಿವೂ ನನಗಿದೆ. ನೆನಪಿದೆ ನನಗೆ,ಅಮ್ಮ ಕ್ರಿಸ್ಮ್‌ಸ್ ಹಬ್ಬಕ್ಕೂ ಮನೆಯಲ್ಲಿ ಪಾಯಸ ಮಾಡುತ್ತಿದ್ದಳು. ನಾನು ಸ್ನೇಹಿತರ ಜೊತೆ ಅದೆಷ್ಟೋ ಸಲ ಚರ್ಚುಗಳಿಗೆ ಹೋಗಿದ್ದೇನೆ. ಅವರ ಮನೆಗಳಲ್ಲೇ ಲೆಕ್ಕವಿಲ್ಲದಷ್ಟು ಬಾರಿ ಊಟ ಮಾಡಿದ್ದೇನೆ. ಆದರೆ, ಮತಾಂತರ ಅನ್ನುವ ವಿಷಯ ಬಂದಾಗ, ನಾನು ಅದರ ವಿರೋಧಿಯೇ.

ಬೇಸಿಗೆಯ ರಜೆಗಳಲ್ಲಿ ಕ್ರಿಶ್ಚಿಯನ್ ಯುವಕರ, ಮಕ್ಕಳ ದಂಡು ಮನೆಮನೆ ತಿರುಗುವ ಕೆಲಸ ಮಾಡುತ್ತದೆ. ಕೈಯಲ್ಲಿ "ಶುಭ ಸಂದೇಶ" ಪುಸ್ತಕ ಹೊತ್ತು, ನೀವು ಬೇಡವೆಂದರೂ ನಿಮ್ಮ ಕೈಯಲ್ಲಿ ಆ ಪುಸ್ತಕ ಇಟ್ಟುಏಸುವಿನ ಗುಣಗಾನ ಮಾಡುತ್ತದೆ. ನಮ್ಮ ಮನೆಗೂ ಅದೆಷ್ಟೋ ಸಲ ಇಂತಹ ತಂಡಗಳು ಬಂದಿವೆ, ನಮ್ಮ ಮನೆಯ ಅಟ್ಟದಲ್ಲಿ ನಾಲ್ಕಾರು ಶುಭ ಸಂದೇಶಗಳಾದರೂ ಧೂಳು ತಿನ್ನುತ್ತ, ಗೆದ್ದಲು ಹಿಡಿಸಿಕೊಂಡು ಬಿದ್ದಿರಬೇಕು. ಈ ತಂಡದ ವಿಶೇಷತೆ ಏನೆಂದರೆ, ಇವರೆಲ್ಲ ತಾವು ಯಾರ ಮನೆಯ ಅಂಗಳದ

    Forward  |  Report abuse
The above message is part of the Discussion Board:
Mangalore: VHP on reconversion spree